ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಈ ಬಾರಿ ಕರ್ನಾಟಕ 2023 ರ ಬಜೆಟ್ ಅನ್ನು ಸಿದ್ದರಾಮಯ್ಯನವರು ಇಂದು ಘೋಷಣೆ ಮಾಡಿದ್ದು, ರಾಜ್ಯದ ಜನತೆಗೆ ಏನೆಲ್ಲಾ ಘೋಷಣೆ ಮಾಡಿದ್ದಾರೆ ಎಂಬುದನ್ನು ನಾವು ತಿಳಿಸುತ್ತೇವೆ. ಅದರಲ್ಲಿಯೂ ವಿದ್ಯಾರ್ಥಿಗಳು ಮತ್ತು ನಿರುದ್ಯೋಗ ಯುವಕರಿಗೆ ಏನೆಲ್ಲಾ ಮೀಸಲಾತಿ ಘೊಷಣೆ ಮಾಡಲಾಗಿದೆ ಎಂಬುದನ್ನು ನಾವು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಜೆಟ್ ನಲ್ಲಿ SC- ST ವಿದ್ಯಾರ್ಥಿಗಳಿಗೆ ಹಾಗು ನಿರುದ್ಯೋಗ ಯುವಕ ಯುವತಿಯರಿಗೆ ಹೆಚ್ಚಿನ ಮೀಸಲಾತಿಯನ್ನು ನೀಡಿದ್ದಾರೆ. SC ST TSP ಅಧಿನಿಯಮ 2013 ರ ಅಡಿಯಲ್ಲಿ ಹಂಚಿಕೆಯಾಗುವ ಅನುದಾನ ಈ ಸಮುದಾಯದ ಒಳಿತಿಗೆ ಬಳಕೆಯಾಗಬೇಕೆಂದು ಸರ್ಕಾರದ ಗುರಿಯಾಗಿದೆ.
ಈ ನಿಟ್ಟಿನಲ್ಲಿ ದಲಿತ ಸಂಘಟನೆಗಳು ಮತ್ತು ಚಿಂತಕರ ಬಹುದಿನಗಳ ಒತ್ತಾಯದ ಅನ್ವಯ ಕಾಯ್ದೆಯ ಸೆಕ್ಷನ್ 7ಇ ಅನ್ನು ಕೈಬಿಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 10 ಕೈಸ್ ವಸತಿ ಶಾಲೆಗಳಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಮತ್ತು ಉತ್ತಮ ಗುಣಮಟ್ಟದ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ತಲಾ 2 ಕೋಟಿ ರೂ ನಂತೆ 20 ಕೋಟಿ ಅನುದಾನ ಒದಗಿಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ವಿಶ್ವದಲ್ಲೇ 250 ರೊಳಗೆ ಯುನಿವರ್ಸಿಟಿ ರ್ಯಾಕಿಂಗ್ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಉಚಿತ ಶಿಕ್ಷಣ ವನ್ನು ವಿದೇಶದಲ್ಲಿ ಪಡೆಯಲು ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲು 36 ಕೋಟಿ ರೂ ಅನುದಾನ ಒದಗಿಸಲಾಗಿದೆ.
ಸ್ವಾವಲಂಬಿ ಸಾರಥಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕರಿಗೆ 4 ಚಕ್ರದ ವಾಹನ ಖರೀದಿಸಲು ಪಡೆಯುವ ಸಾಲದ ಶೇಕಡಾ 75 ರಷ್ಟು ಗರಿಷ್ಠ 4 ಲಕ್ಷ ರುಪಾಯಿ ಸಹಾಯಧನ ನೀಡುವ ಮೂಲಕ ಸ್ವ ಉದ್ಯೋಗ ಮಾಡಲು ಸಹಾಯ ಮಾಡಲಾಗುವುದು.
ಕರ್ನಾಟಕ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ 2 ಕೋಟಿ ರೂವರೆಗೆ ಸರ್ಕಾರದಿಂದ ಸಮನಾಂತರ ಖಾತ್ರಿ ನೀಡುವ ಯೋಜನೆ ಜಾರಿಯಲಿದ್ದು, ಸಾಲದ ಮೊತ್ತವನ್ನು ಹೆಚ್ಚಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 1 ಲಕ್ಷ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲಾಗುವುದು.
ಪ್ರಮುಖ ಲಿಂಕ್ ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |