information

ಆರೆಂಜ್‌ ಅಲರ್ಟ್‌! 1 ವಾರ 11 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ..! ಹವಾಮಾನ ಇಲಾಖೆಯಿಂದ ಪ್ರವಾಸಿಗರಿಗೆ ನಿಷೇಧ

Published

on

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಮಳೆಯ ಎಚ್ಚರಿಕೆಯ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಹಲವೆಡೆ ನದಿಗಳು, ಚರಂಡಿಗಳು ಉಕ್ಕಿ ಹರಿಯುತ್ತಿವೆ. ಆದರೆ ಇಂದಿನಿಂದ ಕೆಲ ದಿನಗಳ ಕಾಲ ಮಳೆಯ ವೇಗ ತುಂಬಾ ಜಾಸ್ತಿಯಾಗಬಹುದು ಮತ್ತು ಈ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮತ್ತೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Rain Warning

ಕರ್ನಾಟಕದ ಕರಾವಳಿ ಹಲವು ಭಾಗಗಳಲ್ಲಿ ಇನ್ನೂ ಮುಂದಿನ ಒಂದು ವಾರಗಳ ಕಾಲ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಮಾನ ಇಲಾಖೆಯಿಂದ ಜು. 4 ರಿಂದ 6 ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ಕೆಲವು ದಿನಗಳಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿಲ್ಲ ಆದರೆ ಜುಲೈ ಪ್ರಾರಂಭದಿಂದ ಮುಂಗಾರು ಚುರುಕುಗೊಳ್ಳುತ್ತಿದೆ. ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಜು.4 ಹಾಗೂ 5ರಂದು ರಾಜ್ಯದ ಅನೇಕ ಭಾಗಗಳಲ್ಲಿ ಹಚ್ಚಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಜುಲೈ 4 ರಿಂದ 8ರವರೆಗೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಕರಾವಳಿಯ ಈ ಭಾಗಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಹಾಗೂ ಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಸಹ ವ್ಯಾಪಕ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ ಮತ್ತು ಜಗಲಬೆಟ್‌ನಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ ಕದ್ರಾದಲ್ಲಿ6 ಸೆಂ.ಮೀ. ಮಳೆಯಾಗಿದೆ. ಉತ್ತರ ಕನ್ನಡದ ಭಾಗಗಳಾದ ಕುಮಟಾ, ಅಂಕೋಲ, ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ 5 ಸೆಂ.ಮೀ ಮಳೆಯಾಗಿದೆ. ಕರಾವಳಿಯ ಅನೇಕ ಭಾಗಗಳಲ್ಲಿ ಭಾನುವಾರ ಅಬ್ಬರದ ಮಳೆಯಾದರೂ ಗಾಳಿಯ ಒತ್ತಡದಿಂದಾಗಿ ನೀರಿಕ್ಷೆಯಷ್ಟು ಮಳೆಯಾಗಿಲ್ಲ.

ಸಮುದ್ರ ತೀರದಲ್ಲಿ ಹೆಚ್ಚಾಗುವ ಅಲೆಗಳ ಅಬ್ಬರ

ಪಶ್ಚಿಮ ಕರಾವಳಿಯ ಭಾಗಗಳಲ್ಲಿ ಗಾಳಿ ಪ್ರಮಾಣವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪ್ರಮುಖ ಬೀಚ್ ಗಳಾದ ಮಲ್ಪೆ, ಸೋಮೇಶ್ವರ, ಉಚ್ಚಿಲ, ಕಾಪು, ಉಳ್ಳಾಲ, ಸೋಮೇಶ್ವರ, ಪಣಂಬೂರು, ತಣ್ಣೀರುಬಾವಿ ತೀರದಲ್ಲಿಅಲೆಗಳ ಅಬ್ಬರ ಹೆಚ್ಚಾಗಿದೆ. ಪ್ರವಾಸಿಗರು ಬೀಚ್‌ ಗಳಿಗೆ ಬರದಂತೆ ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿದೆ. ಚಂಡಮಾರುತದಿಂದ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಾಮಾನದಿಂದಾಗಿ ಹವಮಾನ ಇಲಾಖೆಯ ಮುನ್ಸೂಚನಾ ವರದಿಗಳೂ ತಪ್ಪುತ್ತಿವೆ. ಆದರೆ ಮುಂದಿನ ಒಂದು ವಾರಗಳ ಕಾಲ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಸುತ್ತಮುತ್ತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಇದರ ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿಯಲ್ಲಿ ಮೀನುಗಾರಿಕೆ ಸೇರಿದಂತೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ಸಹ ನಿರ್ಬಂಧಿಸಲು ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞರು ಮಾಹಿತಿ ನೀಡಿದ್ದಾರೆ.

ಪ್ರಮುಖ ಲಿಂಕ್ ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು

ರಾಜ್ಯದ ಜನತೆಗೆ ಮತ್ತೆ ಬರೆ: ಚಿಕನ್‌ ಜೊತೆ ಗಗನಕ್ಕೇರಿದ ದಿನಸಿ ರೇಟ್.! ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ

PM ಕಿಸಾನ್ ಯೋಜನೆ: ರಾಜ್ಯದ ರೈತರಿಗೆ ಬಿಗ್ ಶಾಕ್! ಯಾರಿಗೂ 2000 ರೂ ಸಿಗಲ್ಲ, ಕೇಂದ್ರದ ಈ ತೀರ್ಮಾನಕ್ಕೆ ಕಾರಣ ಏನು ಗೊತ್ತಾ?

Leave your vote

Treading

Load More...
test

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ