ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, 2023 ರ ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಹಲವು ಯೋಜನೆಗಳನ್ನು ಘೋಷಣೇ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲು ಪ್ರಮುಖ ಅನುದಾನವನ್ನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಏನೆಲ್ಲಾ ಪ್ರಯೋಜನಗಳನ್ನು ನೀಡಲಾಯಿತು ಎಂಬುದನ್ನು ನಾವು ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಕಾಂಗ್ರೆಸ್ ಸರ್ಕಾರ ಈ ಹಿಂದೆ ವಿದ್ಯಾರ್ಥಿಗಳ ಶೈಕ್ಷಣಿಕ ನೆರವಿಗಾಗಿ ಜಾರಿ ತಂದಿದ್ದ ವಿದ್ಯಾಸಿರಿ ಯೋಜನೆಗೆ ಮರುಜೀವ ನೀಡಲು ಮುಂದಾಗಿದೆ. ಇಂದಿನ ಬಜೆಟ್ನಲ್ಲಿ ವಿದ್ಯಾಸಿರಿ ಯೋಜನೆಯನ್ನು ಮತ್ತೆ ಆರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿದ್ಯಾರ್ಥಿ ವೇತನ ಮರುಜಾರಿ
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು 24 ಲಕ್ಷ ವಿದ್ಯಾರ್ಥಿಗಳಿಗೆ 881 ಕೋಟಿ ರೂ.ಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗಿತ್ತು. ಆದರೆ, ಹಿಂದಿನ ಸರ್ಕಾರವು 2020-21, 2021-22 ಮತ್ತು 2022-23ನೇ ಸಾಲಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸದೇ ನಿರ್ಲಕ್ಷಿಸಿದ್ದು, ಈ ಕಾರ್ಯಕ್ರಮವನ್ನು ನಮ್ಮ ಸರ್ಕಾರವು ಪುನರ್ ಪ್ರಾರಂಭಿಸಲಿದೆ.
ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗಾಗಿ ಈ ಯೋಜನೆಯನ್ನು ಸಿದ್ದರಾಮಯ್ಯ ಅವರ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಈ ಯೋಜನೆಯಡಿ SC/ST/OBC/PWD ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣ ಪಡೆಯಲು ಈ ವಿದ್ಯಾರ್ಥಿವೇತನ ನೆರವಾಗಿತ್ತು. 10ನೇ ತರಗತಿ ಮುಗಿಸಿದ ನಂತರ ವಾರ್ಷಿಕ 15,000 ರೂಪಾಯಿವರೆಗೆ ವಿದ್ಯಾರ್ಥಿವೇತನ ಸಿಗುತ್ತಿತ್ತು.
ವಿದ್ಯಾಸಿರಿ ಮತ್ತೆ ಆರಂಭ
ವಿದ್ಯಾಸಿರಿ ಯೋಜನೆಯಡಿ ಸರ್ಕಾರದ ವಸತಿ ನಿಲಯಗಳಲ್ಲಿ ಪ್ರವೇಶ ದೊರಕದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಗಾಗಿ ವಾರ್ಷಿಕ 15,000 ರೂ. ನೀಡಲಾಗುತ್ತಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 3.6 ಲಕ್ಷ ವಿದ್ಯಾರ್ಥಿಗಳಿಗೆ 432 ಕೋಟಿ ರೂ.ಗಳ ನೆರವು ನೀಡಲಾಗಿತ್ತು. ಈ ಯೋಜನೆಯನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ಅಂದರೆ, 2020-21, 2021-22 ಮತ್ತು 2022-23ರಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿರುವುದಿಲ್ಲ. ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಅನುಕೂಲವಾಗುವುದರಿಂದ ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮವನ್ನು ಮುಂದುವರೆಸಲಾಗುವುದು.
ಕಾಂಗ್ರೆಸ್ ಸರ್ಕಾರದ ಬಳಿಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ, ಈ ವಿದ್ಯಾಸಿರಿ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಇದರಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಈ ಆರ್ಥಿಕ ನೆರವಿನಿಂದ ವಂಚಿತರಾಗಿದ್ದರು. ಈ ಯೋಜನೆಗೆ ಮರುಜೀವ ನೀಡಿರುವುದರಿಂದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಪ್ರಮುಖ ಲಿಂಕ್ ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |